|
ಪತ್ನಿ ಶೇಷಮ್ಮ ಅವರೊಂದಿಗೆ ಗೊರೂರು ರಾಮಸ್ವಾಮಿ ಅಯ್ಯಂಗಾರ್ |
ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಹಾಸನ ಜಿಲ್ಲೆಯ ಗೊರೂರಿನಲ್ಲಿ1904ರಲ್ಲಿ ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್; ತಾಯಿ ಲಕ್ಷ್ಮಮ್ಮ. ಅವರು ಎಂ.ಎ. ಪರೀಕ್ಷೆ ತೆಗೆದುಕೊಂಡಾಗ ಅವರೇ ರಚಿಸಿದ 'ನಮ್ಮ ಊರಿನ ರಸಿಕರು' ಕೃತಿ ಪಠ್ಯವಾಗಿತ್ತು. ಮಹಾತ್ಮ ಗಾಂಧೀಜಿಯವರ ಆತ್ಮಕಥೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. 'ಅಮೆರಿಕದಲ್ಲಿ ಗೊರೂರು' ಅವರ ಪ್ರವಾಸಕಥನ. ಲಲಿತ ಪ್ರಬಂಧಗಳನ್ನೂ ಬರೆದಿದ್ದಾರೆ. 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
No comments:
Post a Comment